‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

Updated on: Dec 15, 2025 | 8:25 PM

ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ‘45’ ಚಿತ್ರತಂಡ ಭಾಗಿ ಆಗಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ನಟರಾದ ರಾಜ್ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್​​ಕುಮಾರ್ (Shiva Rajkumar) ಅವರು ಒಟ್ಟಿಗೆ ಅಭಿನಯಿಸಿದ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ (45 Movie Trailer) ರಿಲೀಸ್ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ಚಿತ್ರತಂಡ ಭಾಗಿ ಆಗಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಹಲವು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರಪ್ರಸಾರ ಮಾಡಲಾಗಿದೆ. ಸಿನಿಮಾದ ಬಗ್ಗೆ ಉಪೇಂದ್ರ, ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ ಅವರು ಸಿನಿಮಾದ ಬಗ್ಗೆ ವೇದಿಕೆಯಲ್ಲಿ ಮಾತನಾಡಿದ್ದಾರೆ. ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ‘45’ ಸಿನಿಮಾ (45 Movie) ರಿಲೀಸ್ ಆಗಲಿದೆ. ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೆ ‘45’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More