ಒಟಿಟಿಗೆ ‘ಘೋಸ್ಟ್’ 10 ಸಾವಿರ ಅಡಿಯ ಪೋಸ್ಟರ್ ಅನಾವರಣ

|

Updated on: Nov 20, 2023 | 11:01 PM

Shiva Rajkumar: ‘ಘೋಸ್ಟ್’ ಸಿನಿಮಾ ಒಟಿಟಿಗೆ ಬಂದ ಖುಷಿಯಲ್ಲಿ ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ.

ಶಿವರಾಜ್ ಕುಮಾರ್ (Shiva Rajkumar) ನಟನೆಯ ಘೋಸ್ಟ್ (Ghost) ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಚಿತ್ರಮಂದಿರದಲ್ಲಿ ಜೈತಯಾತ್ರೆ ಮುಗಿಸಿ ಇದೀಗ ಒಟಿಟಿಗೆ ಕಾಲಿಟ್ಟಿದ್ದು ಒಟಿಟಿಯಲ್ಲಿಯೂ ಪ್ರೇಕ್ಷಕರನ್ನು ಸಖತ್ ಆಗಿ ಸೆಳೆಯುತ್ತಿದೆ. ‘ಘೋಸ್ಟ್’ ಸಿನಿಮಾ ಒಟಿಟಿಗೆ ಬಂದ ಖುಷಿಯಲ್ಲಿ ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ ಆದರೆ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ5. ‘ಘೋಸ್ಟ್’ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಶಿವಣ್ಣನ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದರು. ಇದೀಗ ಈ ಸಿನಿಮಾ ಜೀ5 ಒಟಿಟಿಯಲ್ಲಿ ತೆರೆ ಕಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 20, 2023 10:51 PM