ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ

Edited By:

Updated on: Jul 21, 2026 | 3:35 PM

Footpath Encroachment Drive: ಶಿವಾಜಿನಗರದಲ್ಲಿ ನಡೆದ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಗಳಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ. ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ವ್ಯಾಪಾರದ ವಸ್ತುಗಳು ಹಾಳಾಗಿವೆ. ದಶಕಗಳಿಂದ ವ್ಯಾಪಾರ ನಡೆಸುತ್ತಿದ್ದವರಿಗೆ ನ್ಯಾಯ ಸಿಗದೇ, ಜೀವನೋಪಾಯಕ್ಕೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ನಡೆದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚಾರಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಜಿಬಿಎ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಆರೋಪದ ಹಿನ್ನೆಲೆ ಹಲವರನ್ನು ವಶಕ್ಕೆ ಪಡೆದಿರುವ ನಡುವೆ ಅಧಿಕಾರಿಗಳ ವಿರುದ್ಧವೇ ವ್ಯಾಪಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ನಮಗೆ ಒಂದು ನಿಮಿಷದ ಸಮಯವನ್ನೂ ನೀಡಿಲ್ಲ. ನಮ್ಮ ಫ್ರಿಡ್ಜ್, ಶೋಕೇಸ್ ಮತ್ತು ಇತರೆ ವ್ಯಾಪಾರದ ವಸ್ತುಗಳು ಸಂಪೂರ್ಣ ಪುಡಿಪುಡಿಯಾಗಿ ಹಾಳಾಗಿವೆ ಎಂದು ದೂರಿದ್ದಾರೆ. ಅರ್ಧ ಗಂಟೆ ಕಾಲಾವಕಾಶವನ್ನೂ ನೀಡದೆ ಬುಲ್ಡೋಜರ್ ಹಾಕಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ತಮ್ಮ ಜೀವ ಉಳಿಸಿಕೊಳ್ಳಲು ಸ್ಥಳದಿಂದ ಹೊರ ಓಡಿ ಬಂದಿದ್ದೇವೆ ಎಂದವರು ದೂರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More