Video: ಮದುವೆ ಹಾಲ್​​​ನ ಶೌಚಾಲಯದ ಬಾಗಿಲಿನಲ್ಲಿ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ

Updated on: Feb 23, 2026 | 11:49 AM

ಹರಿಯಾಣದ ಫರಿದಾಬಾದ್‌ನಲ್ಲಿರುವ 'ಮಿಲನ್ ಬ್ಯಾಂಕ್ವೆಟ್ ಹಾಲ್'ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಶೌಚಾಲಯದ ಬಾಗಿಲುಗಳ ಮೇಲೆ ಬಳಸಿದ್ದಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಮತ್ತು ಇತಿಹಾಸ ಪ್ರೇಮಿಗಳು ಇದನ್ನು ಭಾರತೀಯ ಇತಿಹಾಸ ಮತ್ತು ಹಿಂದುತ್ವದ ಆಸ್ಮಿತೆಗೆ ಮಾಡಿದ ಅಪಚಾರ ಎಂದು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಫರಿದಾಬಾದ್, ಫೆ.23: ಹಿಂದೂಗಳ ಆರಾಧ್ಯ ದೈವ, ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಾಹಸಿ ಮಹಿಳೆ ಮಹಾರಾಣಿ ಪದ್ಮಿನಿ (ಪದ್ಮಾವತಿ) ಅವರ ಭಾವಚಿತ್ರಗಳನ್ನು ಅವಮಾನಕರ ರೀತಿಯಲ್ಲಿ ಬಳಸಿದ ಘಟನೆ ಹರಿಯಾಣದ ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿದೆ. ಇದು ಹಿಂದೂ ಸಂಘಟನೆಗಳು ಮತ್ತು ಇತಿಹಾಸ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ಯಾಂಕ್ವೆಟ್ ಹಾಲ್‌ನ ಶೌಚಾಲಯದ ಬಾಗಿಲುಗಳ ಮೇಲೆ ಪುರುಷ ಮತ್ತು ಮಹಿಳಾ ವಿಭಾಗವನ್ನು ಗುರುತಿಸಲು ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಬಳಸಲಾಗಿತ್ತು. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ, ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ಇದು ಕೇವಲ ಚಿತ್ರಗಳ ಬಳಕೆಯಲ್ಲ, ಬದಲಾಗಿ ಭಾರತೀಯ ಇತಿಹಾಸ ಮತ್ತು ಹಿಂದುತ್ವದ ಆಸ್ಮಿತೆಗೆ ಮಾಡಿದ ಅಪಚಾರ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. : “ನಮ್ಮ ಇತಿಹಾಸದ ವೀರ ಪುರುಷರು ಮತ್ತು ಮಹಿಳೆಯರು ನಮಗೆ ಪೂಜನೀಯರು. ಅವರನ್ನು ಶೌಚಾಲಯದ ಬಾಗಿಲಿಗೆ ಬಳಸುವುದು ಅಕ್ಷಮ್ಯ ಅಪರಾಧ,” ಎಂದು ನೆಟ್ಟಿಗರು ಕಟುವಾಗಿ ಟೀಕಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More