ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಆರೋಪ

Edited By:

Updated on: Jul 21, 2026 | 2:02 PM

ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪಾಲಿಕೆ ಸಿಬ್ಬಂದಿ ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಬೆಂಗಳೂರು, ಜುಲೈ 21: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಲು ಪ್ರಯತ್ನಿಸಲಾಯಿತು ಎಂದು ಪಾಲಿಕೆ ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲದೆ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಯಿತು ಎಂದೂ ಅವರು ಆರೋಪಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿದರು. ಹಲ್ಲೆ ಯತ್ನದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಪಾಲಿಕೆ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More