ಕಲಬುರಗಿ: ಪ್ರಜಾಧ್ವನಿ ಯಾತ್ರೆ ಬಸ್ಸಲ್ಲಿ ಮತ್ತೊಮ್ಮೆ ಅಕ್ಕಪಕ್ಕ ಕೂತು ಕಾರ್ಯಕರ್ತರನ್ನು ಉಲ್ಲಸಿತರಾಗಿಸಿದ ಶಿವಕುಮಾರ-ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2023 | 1:53 PM

ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಶನಿವಾರ ಕಲಬುರಗಿಯಿಂದ ಯಾದಗಿರಿಗೆ ಬಸ್ ಹೊರಟಾಗ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅಕ್ಕಪಕ್ಕ ಕೂತಿದ್ದರು.

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಸಂಸದೀಯ ನಾಯಕ (CLP) ಸಿದ್ದರಾಮಯ್ಯ (Siddaramaiah) ನಡುವೆ ಮೊದಲಿನ ಹಾಗೆ ಹಾವು-ಮುಂಗುಸಿ ವರ್ತನೆಗಳಿಲ್ಲ, ವೈಯಕ್ತಿಕ ಪ್ರತಿಷ್ಠೆಯನ್ನು ಪಕ್ಕಕ್ಕಿಟ್ಟು ಪ್ರಜಾಧ್ವನಿ ಯಾತ್ರೆಯಲ್ಲಿ ಜೊತೆಜೊತೆಯಾಗಿ ಓಡಾಡುತ್ತಾ, ವೇದಿಕೆ ಮೇಲೆ ಹ್ಯಾಂಡ್ ಶೇಕ್ ಮಾಡುವುದು, ಆಲಂಗಿಸಸಿಕೊಳ್ಳುವುದನ್ನು ಮಾಡುತ್ತಿದ್ದಾರೆ. ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಶನಿವಾರ ಕಲಬುರಗಿಯಿಂದ ಯಾದಗಿರಿಗೆ ಬಸ್ ಹೊರಟಾಗ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅಕ್ಕಪಕ್ಕ ಕೂತಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jan 28, 2023 01:47 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.