ಸಚಿವ ಜಮೀರ್ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪಕ್ಷದ ಮುಸ್ಲಿಂ ಮುಖಂಡರಿಂದ ಆಗ್ರಹ
ಕಾಂಗ್ರೆಸ್ ಪಕ್ಷದ ಮುಸ್ಲಿ ಮುಖಂಡರು ಸಹ ಜಮೀರ್ ಅಹ್ಮದ್ ಸಹ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಎಆರ್ಎಮ್ ಹುಸೇನ್ ಅಧ್ಯಕ್ಷರಿಗೆ ಪತ್ರವೊಂದನ್ನು ಬರೆದು, ಜಮೀರ್ ಪದಬಳಕೆ ಪಕ್ಷದ ಇಮೇಜಿಗೆ ಘಾಸಿಯನ್ನುಂಟು ಮಾಡಿದೆ, ಉಪ ಚುನಾವಣೆಯ ಮೇಲೂ ಅಡ್ಡಪರಿಣಾಮ ಬೀರಿದೆ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದಿದ್ದಾರೆ.
ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದು ತಪ್ಪು ಅಂತ ಉಪ ಚುನಾವಣೆ ಮುಗಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಅರಿವಾಗಿದೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಶಿವಕುಮಾರ್, ಜಮೀರ್ ಮಾತಾಡಿದ್ದನ್ನು ತಪ್ಪು ಅಂತ ಅಂಗೀಕರಿಸಿ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆಯೇ ಇಲ್ಲವೇ ಅಂತ ಬಹಿರಂಗಪಡಿಸಲಾಗದು ಎಂದು ಹೇಳಿದರು. ಜಮೀರ್ ಸಂಚಕಾರ ಕಾದಿರುವುದು ನಿಶ್ಚಿತ ಎಂಬ ಗುಮಾನಿ ಸಾರ್ವಜನಿಕರಲ್ಲಿ ಮೂಡುತ್ತಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಡಿಕೆ ಶಿವಕುಮಾರ್ ಜೊತೆಗೆ ತೇಜಸ್ವಿ ಸೂರ್ಯ ಮೆಟ್ರೋ ಸಂಚಾರ
Latest Videos