ಸಚಿವ ಜಮೀರ್ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪಕ್ಷದ ಮುಸ್ಲಿಂ ಮುಖಂಡರಿಂದ ಆಗ್ರಹ

ಅರುಣ್​ ಕುಮಾರ್​ ಬೆಳ್ಳಿ

Updated on: Nov 16, 2024 | 12:18 PM

ಕಾಂಗ್ರೆಸ್ ಪಕ್ಷದ ಮುಸ್ಲಿ ಮುಖಂಡರು ಸಹ ಜಮೀರ್ ಅಹ್ಮದ್ ಸಹ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಎಆರ್​ಎಮ್ ಹುಸೇನ್​ ಅಧ್ಯಕ್ಷರಿಗೆ ಪತ್ರವೊಂದನ್ನು ಬರೆದು, ಜಮೀರ್ ಪದಬಳಕೆ ಪಕ್ಷದ ಇಮೇಜಿಗೆ ಘಾಸಿಯನ್ನುಂಟು ಮಾಡಿದೆ, ಉಪ ಚುನಾವಣೆಯ ಮೇಲೂ ಅಡ್ಡಪರಿಣಾಮ ಬೀರಿದೆ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದು ತಪ್ಪು ಅಂತ ಉಪ ಚುನಾವಣೆ ಮುಗಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಅರಿವಾಗಿದೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಶಿವಕುಮಾರ್, ಜಮೀರ್ ಮಾತಾಡಿದ್ದನ್ನು ತಪ್ಪು ಅಂತ ಅಂಗೀಕರಿಸಿ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆಯೇ ಇಲ್ಲವೇ ಅಂತ ಬಹಿರಂಗಪಡಿಸಲಾಗದು ಎಂದು ಹೇಳಿದರು. ಜಮೀರ್ ಸಂಚಕಾರ ಕಾದಿರುವುದು ನಿಶ್ಚಿತ ಎಂಬ ಗುಮಾನಿ ಸಾರ್ವಜನಿಕರಲ್ಲಿ ಮೂಡುತ್ತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಕೆ ಶಿವಕುಮಾರ್​ ಜೊತೆಗೆ ತೇಜಸ್ವಿ ಸೂರ್ಯ ಮೆಟ್ರೋ ಸಂಚಾರ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.