ಶಿವಕುಮಾರ ಭ್ರಷ್ಟಾಚಾರದ ಬ್ರ್ಯಾಂಡ್ ಅಂಬ್ಯಾಸಿಡರ್ ಎಂದರು ಸಾರಿಗೆ ಸಚಿವ ಶ್ರೀರಾಮುಲು
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವರು ಶಿವಕುಮಾರ ಭಷ್ಟಾಚಾರದ ಬ್ರ್ಯಾಂಡ್ ಅಂಬಾಸಿಡರ್ ಎಂದು ಹೇಳಿದರು
ಚಿತ್ರದುರ್ಗ: ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಪೇಸಿಎಮ್ ಅಭಿಯಾನ ನಡೆಸುತ್ತಿರುವ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರನ್ನು ತರಾಟೆಗೆ ತೆಗೆದುಕೊಂಡರು. ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವರು ಶಿವಕುಮಾರ ಭಷ್ಟಾಚಾರದ ಬ್ರ್ಯಾಂಡ್ ಅಂಬಾಸಿಡರ್ ಎಂದು ಹೇಳಿದರು