ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಸೋಮಣ್ಣ

Edited By:

Updated on: Apr 01, 2026 | 4:55 PM

ಡಿಕೆ ಶಿವಕುಮಾರ್ ಸ್ಥಳ ಪರಿಶೀಲನೆಗೆ ಅಧಿಕಾರಿಗಳನ್ನು ಕರೆದೊಯ್ಯಲಿ, ಅದರೆ ಅವರ ಜೊತೆ ಹೋಗುವ ತಾಂತ್ರಿಕ ಅಧಿಕಾರಿಗಳು ಸರ್ಕಾರದ ಭಾಗವಾಗಿರುವುದರಿಂದ ಅವರು ಸರ್ಕಾರದ ನಿರ್ಣಯಗಳಿಗೆ ಪರವಾದ ವರದಿಯನ್ನು ನೀಡುತ್ತಾರೆ, ಹಾಗಾಗಿ ಡಿಸಿಎಂ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಧಿಕಾರಿಗಳನ್ನು ಕರೆದೊಯ್ದರೆ ವಸ್ತುಸ್ಥಿತಿಯ ಬಗ್ಗೆ ನೈಜ್ಯ ಮತ್ತು ಸಮಗ್ರ ಮಾಹಿತಿ ಸಿಗುತ್ತದೆ ಎಂದು ಸೋಮಣ್ಣ ಹೇಳಿದರು.

ತುಮಕೂರು, ಜುಲೈ 5: ರಾಜ್ಯದಲ್ಲಿ ಬೆಂಗಳೂರು ನಂತರ ಅತಿವೇಗವಾಗಿ ಬೆಳೆಯುತ್ತಿರುವ ನಗರವೆಂದರೆ ತುಮಕೂರು, ಇಲ್ಲಿಯ ಜನರ ಕುಡಿಯುವ ನೀರಿನ ಸಮಸ್ಯೆ ಮತ್ತು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿವಾದದ ಬಗ್ಗೆ ನಿನ್ನೆ ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಜಿ ಪರಮೇಶ್ವರ್ ಸೇರಿದಂತೆ ಈ ಭಾಗದ ಎಲ್ಲ ಶಾಸಕರು ಹಾಜರಿದ್ದ ಸಭೆಯಲ್ಲಿ ಶಿವಕುಮಾರ್ ತಮ್ಮ ಪ್ರಸ್ತಾಪಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jul 05, 2025 12:05 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More