ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಬಿರುಕು ಹೆಚ್ಚುತ್ತಿದೆಯೆಂಬ ವಾದವನ್ನು ಶಿವಕುಮಾರ ತಳ್ಳಿಹಾಕಿದರು
ನಮ್ಮ ಮುಖ್ಯ ಉದ್ದೇಶ ರಾಜ್ಯದಲ್ಲಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ, ಮುಖ್ಯಮಂತ್ರಿ ಯಾರಾಗಬೇಕೆನ್ನುವುದು ಹೈಕಮಾಂಡ್ ಸುಪರ್ದಿಗೆ ಬಿಟ್ಟ ವಿಚಾರವಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು: ಕೆಲ ಕಾಂಗ್ರೆಸ್ ನಾಯಕರ ಹೇಳಿಕೆಗಳಿಂದ ತಮ್ಮ ಹಾಗೂ ಸಿದ್ದರಾಮಯ್ಯ (Siddaramaiah) ನಡುವೆ ಮನಸ್ತಾಪ ಉಂಟಾಗಿ ಬಿರುಕು ಹೆಚ್ಚುತ್ತಿದೆ ಎನ್ನುವ ವಾದವನ್ನು ಡಿಕೆ ಶಿವಕುಮಾರ (DK Shivakumar) ಅಲ್ಲಗಳೆದರು. ಬೆಂಗಳೂರಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷರು, ತಾನು, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ (Rahul Gandhi) ಜೊತೆಯಾಗಿ ಕೂತು ಚರ್ಚೆ ಮಾಡಿಯಾಗಿದೆ, ನಮ್ಮ ಮುಖ್ಯ ಉದ್ದೇಶ ರಾಜ್ಯದಲ್ಲಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ, ಮುಖ್ಯಮಂತ್ರಿ ಯಾರಾಗಬೇಕೆನ್ನುವುದು ಹೈಕಮಾಂಡ್ ಸುಪರ್ದಿಗೆ ಬಿಟ್ಟ ವಿಚಾರವಾಗಿದೆ ಎಂದು ಅವರು ಹೇಳಿದರು.