ಮುಖ್ಯಮಂತ್ರಿಯವರ ಪ್ರತಿ ಮಾತಿಗೆ ವಿರೋಧ ಪಕ್ಷದ ಸದಸ್ಯರು ಸದನದಲ್ಲಿ ಅಡ್ಡಿಪಡಿಸುತ್ತಿದ್ದಾರೆ: ಶಿವಕುಮಾರ್

ಮುಖ್ಯಮಂತ್ರಿಯವರ ಪ್ರತಿ ಮಾತಿಗೆ ವಿರೋಧ ಪಕ್ಷದ ಸದಸ್ಯರು ಸದನದಲ್ಲಿ ಅಡ್ಡಿಪಡಿಸುತ್ತಿದ್ದಾರೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 26, 2024 | 12:40 PM

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಿದ ಶಿವಕುಮಾರ್ ಮುಡಾ ಪ್ರಕರಣದಲ್ಲೂ ವಿರೋಧ ಪಕ್ಷಗಳ ನಾಯಕರು ವೃಥಾ ದೊಂಬಿ ನಡೆಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿಯವರಿಗೆ ಮಾತಾಡುವ ಅವಕಾಶ ನೀಡುತ್ತಿಲ್ಲ ಎಂದರು.

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯೊಂದನ್ನು ಕರೆದು ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕರು ತಾವೇ ತೋಡಿದ ಬಾವಿಯಲ್ಲಿ ಬೀಳಲು ಅಣಿಯಾಗುತ್ತಿದ್ದಾರೆ ಎಂದು ಹೇಳಿದರು. ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಅಧಿಕಾರಿಗಳಿಂದ ಅವ್ಯವಹಾರ ನಡೆದಿದ್ದು ₹89 ಕೋಟಿಗಳಷ್ಟಾದರೆ ಸದನದಲ್ಲಿ ವಿರೋಧ ಪಕ್ಷದ ನಾಯಕರು ₹187 ಕೋಟಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿದ ದುರುಪಯೋಗಪಡಿಸಿಕೊಳ್ಳಲಾಗಿದ್ದ ಹಣವನ್ನು ವಾಪಸ್ಸು ಪಡೆಯಲಾಗಿದೆ. ಎಸ್ಐಟಿ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದರೂ ಈಡಿ ಮತ್ತು ಸಿಬಿಐಗೆ ದೂರು ನೀಡಿದ್ದಾರೆ. ಸದನದಲ್ಲಿ ಪ್ರಕರಣದ ಚರ್ಚೆಯಾಗುವಾಗ, ಅರ್ ಅಶೋಕ ಮತ್ತು ಪರಿಷತ್ ನಲ್ಲಿ ಸಿಟಿರವಿ ಅವರಿಗೆ ಮುಕ್ತವಾಗಿ ಮಾತಾಡುವ ಅವಕಾಶ ಕಲ್ಪಿಸಲಾಗಿದೆ. ಆದರೆ ಮುಖ್ಯಮಂತ್ರಿಯವರು ಮಾತಾಡಲು ಎದ್ದು ನಿಂತಾಗ ಅವರ ಪ್ರತಿಮಾತಿಗೆ ಕೊಕ್ಕೆ ಹಾಕುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಈ ಕಾರಣಕ್ಕಾಗೇ ಮುಖ್ಯಮಂತ್ರಿಯವರ ಬಿಜೆಪಿ ಕಾಲದಲ್ಲಿ ನಡೆದ ಹಗರಣಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Assembly Session: ತಮ್ಮ ಕಾಲದ ಹಗರಣಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ: ಡಿಕೆ ಶಿವಕುಮಾರ್