ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎನ್ನುವ ಶಿವಕುಮಾರ್ ಕ್ಷಮೆ ಕೇಳಬೇಕು: ಶೋಭಾ ಕರಂದ್ಲಾಜೆ

Updated on: Aug 27, 2025 | 2:54 PM

ಕನ್ನಡ ತಾಯಿಯನ್ನು ಭುವನೇಶ್ವರಿ ಅಂತ ಕರೆಯಲು ಒಪ್ಪದ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಮಹೋತ್ಸವ ಉದ್ಘಾಟನೆಗೆ ಆಮಂತ್ರಿಸಲಾಗಿದೆ, ಅವರನ್ನು ಆಹ್ವಾನಿಸಿರುವ ಹಿಂದಿನ ಮರ್ಮವೇನು? ಶಿವಕುಮಾರ್ ಅವರು ತಾವಾಡಿದ ಮಾತಗಳಿಗೆ ಕೂಡಲೇ ಕ್ಷಮೆ ಕೇಳಬೇಕು; ರಾಜ್ಯದಲ್ಲಿ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯ ಷಡ್ಯಂತ್ರ ನಡೆಯಲು ಬಿಜೆಪಿ ಬಿಡಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ದೆಹಲಿ, ಆಗಸ್ಟ್ 27: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು (Shobha Karandlaje) ರಾಷ್ಟ್ರದ ರಾಜಧಾನಿಯಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ರಾಷ್ಟ್ರೀಯ ಮಾಧ್ಯಮಗಳಿಗೆ ಅರ್ಥವಾಗುವುದಕ್ಕೋಸ್ಕರ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತಾಡಿದ ಅವರು ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ, ಇತ್ತಿಚಿಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಇದನ್ನೂ ಓದಿ:  ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ, ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ