ಸರ್ಕಾರದ ತೊಳಲಾಟವನ್ನು ಹೊರಹಾಕಿದ ಶಿವಕುಮಾರ್​ರನ್ನು ಅಭಿನಂದಿಸುತ್ತೇನೆ: ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Nov 01, 2024 | 12:46 PM

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಬ್ಬ ಅನುಭವಿ ರಾಜಕಾರಣಿಯಾಗಿದ್ದಾರೆ, ಗ್ಯಾರಂಟಿ ಯೋಜನೆಗಳ ವಿಷಯದಲ್ಲಿ ನಿನ್ನೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್​ರನ್ನು ತರಾಟೆಗೆ ತೆಗೆದುಕೊಂಡಿದ್ದು ಸರಿಯಾಗಿದೆ, ಸೋನಿಯ ಮತ್ತು ರಾಹುಲ್ ಗಾಂಧಿಯಿಂದಾಗದ ಕೆಲಸವನ್ನು ಖರ್ಗೆ ಮಾಡಿದ್ದಾರೆ ಎಂದು ಸೋಮಣ್ಣ ಹೇಳಿದರು.

ದೆಹಲಿ: ಗ್ಯಾರಂಟಿ ಯೋಜನೆಗಳನ್ನು ಜಾರಿಯಲ್ಲಿಡಲು ಸಿದ್ದರಾಮಯ್ಯ ಸರ್ಕಾರ ಹೆಣಗಾಡುತ್ತಿದೆ, ಸರ್ಕಾರದ ತೊಳಲಾಟ ಮತ್ತು ವೇದನೆಯನ್ನು ಅದುಮಿಟ್ಟುಕೊಳ್ಳಲಾರದೆ ಮಾರ್ಮಿಕವಾಗಿ ಹೊರಹಾಕಿದ ಡಿಕೆ ಶಿವಕುಮಾರ್ ಅವರನ್ನು ತಾನು ಅಭಿನಂದಿಸುವುದಾಗಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ದೇಶದ ಆರ್ಥಿಕ ಸ್ಥಿತಿ, ರಾಜ್ಯದ ಪಾಲುದಾರಿಕೆ ಮತ್ತು ಇತಿಮಿತಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಡೆಸಬೇಕಾಗುತ್ತದೆ, ಚುನಾವಣೆ ಸಮಯದಲ್ಲಿ ಜನರಿಗೆ ಉದ್ವೇಗದಲ್ಲಿ ಆಶ್ವಾಸನೆ ನೀಡುವ ಮೊದಲು ಹತ್ತು ಸಲ ಯೋಚಿಸಬೇಕು ಎಂದು ಸೋಮಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.