ರಸ್ತೆಯಲ್ಲಿ ತಳ್ಳು ಗಾಡಿ ಇಟ್ಟಿದ್ದಕ್ಕೆ ಗಲಾಟೆ: ಬೀದಿ ಬದಿ ವ್ಯಾಪಾರಿ ಮೇಲೆ ಪಿಸಿ ಹಲ್ಲೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 08, 2024 | 10:17 PM

ರಸ್ತೆಯಲ್ಲಿ ತಳ್ಳುವ ಗಾಡಿಯಿಟ್ಟಿದ್ದಕ್ಕೆ ಸಂಚಾರಿ ವಿಭಾಗದ ಪೊಲೀಸ್ ಕಾನ್ಸ್​ಟೇಬಲ್​ ಮತ್ತು ವ್ಯಾಪಾರಿ ನಡುವೆ ಗಲಾಟೆ ನಡೆದಿದ್ದು, ಈ ನಡುವೆ ಪಿಸಿ ರಕ್ತ ಬರುವಂತೆ ವ್ಯಾಪಾರಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಶಿವಮೊಗ್ಗ ಗಾಂಧಿ ಬಜಾರ್​ನಲ್ಲಿ ನಡೆದಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಿವಮೊಗ್ಗ, ಜುಲೈ 08: ನಗರದ ಗಾಂಧಿ ಬಜಾರ್​ನಲ್ಲಿ ಪೊಲೀಸ್ ಕಾನ್ಸ್​ಟೇಬಲ್ (police constable)​ ಹಾಗೂ ವ್ಯಾಪಾರಿ ನಡುವೆ ಗಲಾಟೆ ಉಂಟಾಗಿದೆ. ಈ ವೇಳೆ ಬೀದಿ ಬದಿ ವ್ಯಾಪಾರಿ ಬಸವರಾಜ್ ಮೇಲೆ ಸಂಚಾರಿ ವಿಭಾಗದ ಪಿಸಿ ರಮೇಶ್ ಹಲ್ಲೆ (assaulted) ಮಾಡಿದ್ದಾರೆ. ರಸ್ತೆಯಲ್ಲಿ ತಳ್ಳುವ ಗಾಡಿಯಿಟ್ಟಿದ್ದಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ವಾಗ್ವಾದದಿಂದ ಕುಪಿತಗೊಂಡ ಪಿಸಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದಾರೆ. ವ್ಯಾಪಾರಿ ಬಸವರಾಜ್ ತಲೆಯಿಂದ ರಕ್ತ ಸೋರುವಂತೆ ಹಲ್ಲೆ ಮಾಡಲಾಗಿದೆ. ಗಾಯಾಳು ಬಸವರಾಜ್​ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಸಿ ರಮೇಶ್ ವರ್ತನೆ ಖಂಡಿಸಿ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹಲ್ಲೆ ನಡೆಸಿದ ಕಾನ್ಸ್​ಟೇಬಲ್ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ನಂತರ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow us on