AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಬಸವರಾಜ್​ ಯರಗಣವಿ
| Edited By: |

Updated on: Mar 20, 2026 | 1:33 PM

Share

ಶಿವಮೊಗ್ಗದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬ್ರೀಜಾ ಕಾರು ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್, ದೊಡ್ಡ ಪ್ರಾಣಾಪಾಯ ತಪ್ಪಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ವೈರಲ್ ಆಗಿದ್ದು, ಪೂರ್ವ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ್ಯಂಬ್ಯುಲೆನ್ಸ್ ಚಾಲಕನ ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More