ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಸಂಸದ ರಾಘವೇಂದ್ರ..!

ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಸಂಸದ ರಾಘವೇಂದ್ರ..!

ರಮೇಶ್ ಬಿ. ಜವಳಗೇರಾ
|

Updated on: Nov 17, 2024 | 2:28 PM

ಗೃಹಲಕ್ಷ್ಮಿಯ ಬೆನ್ನಲ್ಲೆ ಬಿಪಿಎಲ್ ಕಾರ್ಡುದಾರರಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಜಿಎಸ್​ಟಿ, ಐಟಿ ತೆರಿಗೆ ಪಾವತಿ ಹಾಗೂ ಸರ್ಕಾರಿ ಅಧಿಕಾರಿ ಆಗಿದ್ದು ಬಿಪಿಎಲ್​ ಕಾರ್ಡ್​ಗಳನ್ನು ಹೊಂದಿರುವಂತರ ಕಾರ್ಡ್​ಗಳನ್ನು ರದ್ದು ಮಾಡಲಾಗಿದೆ. ಇದಕ್ಕೆ ಪರ ವಿರೋಧದ ಚರ್ಚೆಗಳು ನಡೆದಿವೆ. ಆದ್ರೆ, ಸರ್ಕಾರದ ನಡೆಗೆ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಜೈ ಎಂದಿದ್ದಾರೆ.

ಶಿವಮೊಗ್ಗ, (ನವೆಂಬರ್ 17): ಬಿಪಿಎಲ್ ಕಾರ್ಡುದಾರರಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಜಿಎಸ್​ಟಿ, ಐಟಿ ತೆರಿಗೆ ಪಾವತಿ ಹಾಗೂ ಸರ್ಕಾರಿ ಅಧಿಕಾರಿ ಆಗಿದ್ದು ಬಿಪಿಎಲ್​ ಕಾರ್ಡ್​ಗಳನ್ನು ಹೊಂದಿರುವಂತರ ಕಾರ್ಡ್​ಗಳನ್ನು ರದ್ದು ಮಾಡಲಾಗಿದೆ. ಇದಕ್ಕೆ ಪರ ವಿರೋಧದ ಚರ್ಚೆಗಳು ನಡೆದಿವೆ. ವಿಪಕ್ಷ ನಾಯಕರಾದ ಆರ್ ಅಶೋಕ್ ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಆದ್ರೆ, ಮತ್ತೊಂದೆಡೆ ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಮಾತ್ರ ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಈ ವಿಚಾರದಲ್ಲಿ ಕೆಲವೊಂದು ಸರಿ ಇದೆ. BPL ಕಾರ್ಡ್​ಗೆ ಬೇಕಾದ ಮಾನದಂಡಕ್ಕೆ ಬದಲಾಗಬೇಕಿದೆ. ಈ ವಿಚಾರದಲ್ಲಿ ನಾನು ಟೀಕಿಸಲ್ಲ, ಕೇಲವೊಂದು ಬದಲಾಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ.