ನಮೋ ಯುವ ರನ್‌ ಮ್ಯಾರಥಾನ್‌ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಸ್ತ್‌ ಡ್ಯಾನ್ಸ್‌

Updated on: Sep 21, 2025 | 12:41 PM

ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿ ನಡೆದ ನಮೋ ಯುವ ರನ್‌ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಸ್ತ್‌ ಡ್ಯಾನ್ಸ್‌ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯೇಂದ್ರ ಜೈ ಹೋ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಶಿವಮೊಗ್ಗ, ಸೆಪ್ಟೆಂಬರ್‌ 21: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ ಬಳಿ ಇಂದು ನಡೆದ ನಮೋ ಯುವ ರನ್‌ ಮ್ಯಾರಥಾನ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y. Vijayendra) ಭರ್ಜರಿ ಡ್ಯಾನ್ಸ್‌ ಮಾಡಿದ್ದಾರೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು, ಅದರ ಜೊತೆ ಸೇರಿ ಬಿ.ವೈ ವಿಜಯೇಂದ್ರ ಜೈ ಹೋ ಹಾಡಿಗೆ ಮಸ್ತ್‌ ಹೆಜ್ಜೆ ಹಾಕಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ