ಕಾಂತಾರ ಚಿತ್ರತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಅವಘಡ ಆಗಿತ್ತು ಎಂಬ ಸುದ್ದಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರತಂಡದ ಯಾರಿಗೂ ತೊಂದರೆ ಆಗಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾದ ಶೂಟಿಂಗ್ ವೇಳೆ ಅವಘಡ ಆಗಿತ್ತು ಎಂಬ ಸುದ್ದಿಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ (Shivamogga DC) ಗುರುದತ್ ಹೆಗಡೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿನ್ನೆ (ಜೂ.15) ಪೋಲಿಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಗಾಳಿಯಿಂದ ಸೆಟ್ ಬಿದ್ದಿದೆ ಅಷ್ಟೇ. ಅಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಯಾರಿಗೂ ಗಾಯ ಆಗಿಲ್ಲ. ಕಾಂತಾರ ಚಿತ್ರತಂಡ ಸ್ಥಳೀಯವಾಗಿ ಅನುಮತಿ ಪಡೆದಿದೆ. ಸ್ಥಳೀಯ ಪೊಲೀಸರು, ಅರಣ್ಯ ಇಲಾಖೆ ಒಪ್ಪಿಗೆ ಪಡೆದಿದ್ದಾರೆ. ಚಿತ್ರತಂಡ ಶೂಟಿಂಗ್ ಮುಂದುವರಿಸಲು ಅಭ್ಯಂತರ ಇಲ್ಲ. ಬೇರೆ ಸ್ಥಳದಲ್ಲಿ ಶೂಟಿಂಗ್ ಮಾಡುವಾಗ ಗಮನಕ್ಕೆ ತರಬೇಕು. ನಮ್ಮ ಗಮನಕ್ಕೆ ತಂದರೆ ಯಾವುದೇ ಸಮಸ್ಯೆ ಆಗುವುದಿಲ್ಲ’ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ (Gurudatta Hegde) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
