AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು

Basavaraj Yaraganavi
| Edited By: |

Updated on: Apr 29, 2026 | 4:21 PM

Share

ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ವಿರೋಧಿ ನೀತಿ, ಶುಲ್ಕ ಹೆಚ್ಚಳ, ಮತ್ತು ಫಲಿತಾಂಶದ ಗೊಂದಲಗಳನ್ನು ಖಂಡಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್ಯಾರ್ಥಿಗಳು ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್ ರಾಜೀನಾಮೆಗೆ ಆಗ್ರಹಿಸಿ, ತಮ್ಮ ಬೇಡಿಕೆಗಳು ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಹಲವು ವರ್ಷಗಳಿಂದಲೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದ ವಿವಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು ಬಂದಿರುವುದನ್ನು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಪರಿಕ್ಷಾ ಶುಲ್ಕ, ಕ್ರೀಡಾ ಶುಲ್ಕ ಮತ್ತು ಘಟಿಕೋತ್ಸವ ಶುಲ್ಕಗಳ ಅಸಮರ್ಪಕ ಹೆಚ್ಚಳದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕುಲಪತಿ, ಕುಲಸಚಿವ ಮತ್ತು ರಿಜಿಸ್ಟ್ರಾರ್​​ರನ್ನು ವಜಾ ಮಾಡಿ ದಕ್ಷ ಅಧಿಕಾರಿಗಳನ್ನು ನೇಮಿಸುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us