ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಶಿವಮೊಗ್ಗದ ಎನ್.ಟಿ. ರಸ್ತೆಯಲ್ಲಿ ಜೂನ್ 28 ರಂದು ನಡೆದ ಭೀಕರ ರಸ್ತೆ ಹಲ್ಲೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್‌ನಲ್ಲಿದ್ದ ಮೂವರು ವ್ಯಕ್ತಿಗಳು ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ, ಜುಲೈ 05: ರಸ್ತೆಯಲ್ಲಿ ನಿಂತಿದ್ದ ಓರ್ವ ವ್ಯಕ್ತಿಯನ್ನು ಮೂವರು ಯುವಕರು ಅಟ್ಟಾಡಿಸಿಕೊಂಡು ಹಲ್ಲೆ (assaulted) ಮಾಡಿರುವಂತಹ ಘಟನೆ ನಗರದ ಎನ್.ಟಿ.ರಸ್ತೆ ಪಾಂಡುರಂಗ ವಿಠಲ ದೇಗುಲ ಬಳಿ ಜೂನ್ 28ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 05, 2025 02:23 PM
