AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

ಶಿವಮೊಗ್ಗ: ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

ಬಸವರಾಜ್​ ಯರಗಣವಿ
| Edited By: |

Updated on:Sep 09, 2025 | 10:05 AM

Share

ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಈ ಹಿಂದೆ ದೊಡ್ಡ ಸದ್ದುಮಾಡಿತ್ತು. ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳಯ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ.

ಶಿವಮೊಗ್ಗ, ಸೆಪ್ಟೆಂಬರ್ 9: ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್​​​ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್​​ಪಿ ಮಿಥುನ್ ಕುಮಾರ್ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 09, 2025 10:04 AM

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More