ಶಿವಮೊಗ್ಗ: ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ
ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಈ ಹಿಂದೆ ದೊಡ್ಡ ಸದ್ದುಮಾಡಿತ್ತು. ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳಯ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ.
ಶಿವಮೊಗ್ಗ, ಸೆಪ್ಟೆಂಬರ್ 9: ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.
Published on: Sep 09, 2025 10:04 AM