ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸಕ್ಕೆ ಪೋಸ್ಟರ್​ ಅಂಟಿಸಿದ ಕಿಡಿಗೇಡಿಗಳು

Edited By:

Updated on: Nov 08, 2026 | 11:13 AM

ಶಿವಮೊಗ್ಗದಲ್ಲಿ ಬಿಜೆಪಿ-ಕಾಂಗ್ರೆಸ್ ರಾಜಕೀಯ ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸ ಹಾಗೂ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಮುಖಂಡರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಶಿವಮೊಗ್ಗ, ನವೆಂಬರ್ 08: ಶಿವಮೊಗ್ಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರ ಮತ್ತಷ್ಟು ತಾರಕಕ್ಕೇರಿದೆ. ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿದ್ಯಾನಗರದ ನಿವಾಸ ಹಾಗೂ ದೀನ್ ದಯಾಳ್ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಅವಹೇಳನಕಾರಿ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಇದರಲ್ಲಿ ಬಿಜೆಪಿ ವಿರುದ್ಧ ಪ್ರಚೋದನಕಾರಿ ಘೋಷಣೆಗಳಿದ್ದು, ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಪಕ್ಷ ಹತಾಶಗೊಂಡು ಇಂತಹ ಕೃತ್ಯಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್ ಇಲಾಖೆ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಪೋಸ್ಟರ್ ಅಂಟಿಸಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಜಗದೀಶ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಪೋಸ್ಟರ್ ಅಂಟಿಸಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಳೆದ 15-20 ದಿನಗಳಿಂದ ನಡೆಯುತ್ತಿರುವ ಕಾಂಗ್ರೆಸ್-ಬಿಜೆಪಿ ವಾಕ್ಸಮರ ಇದೀಗ ಪೋಸ್ಟರ್ ಸಮರದ ರೂಪ ಪಡೆದುಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More