ಗಾಂಜಾ ಗುಂಗಿನಲ್ಲಿ ತೇಲಾಡಿದ ಕಾಲೇಜು ವಿದ್ಯಾರ್ಥಿಗಳ ಅಸಲಿಯತ್ತೇನು? ಶಿವಮೊಗ್ಗ ಎಸ್ಪಿ ಹೇಳಿದ್ದೇನು?
ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ನಶೆಯಲ್ಲಿ ತೂರಾಡಿದ್ದಾರೆ ಎಂದು ಹೇಳಲಾಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ನಶೆಯಲ್ಲಿ ತೂರಾಡಿದ್ದಾರೆ ಎಂದು ಹೇಳಲಾಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದ್ರೆ ಈ ಸಂಬಂಧ ವಿಚಾರಣೆ ನಡೆಸಿರುವ ಶಿವಮೊಗ್ಗ ಎಸ್ಪಿ ಬಿ.ಎಂ. ಲಕ್ಷ್ಮಿ ಪ್ರಸಾದ್ ಸತ್ಯ ಸಂಗತಿ ಬಿಚ್ಚಿಟ್ಟಿದ್ದಾರೆ. ಆ ಮೂವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡಿಲ್ಲ. ಈಗಾಗಲೇ ಪೊಲೀಸರು ಕಾಲೇಜ್ ವಿದ್ಯಾರ್ಥಿ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಕಾಲೇಜು ರಸ್ತೆಯಲ್ಲಿರುವ ಬಾರ್ ಗೆ ಹೋಗಿ ವಿದ್ಯಾರ್ಥಿಗಳು ಮದ್ಯಪಾನ ಮಾಡಿದ್ದಾರೆ. ಬಳಿಕ ಸಂಜೆ ಭದ್ರಾವತಿಗೆ ವಾಪಸ್ ತೆರಳಲು ಕಾಲೇಜ್ ಬಸ್ ಗೆ ಹತ್ತಲು ಹೋದಾಗ ಘಟನೆ ಬಯಲಾಗಿದೆ. ಈ ಸಂದರ್ಭದಲ್ಲಿ ಮದ್ಯದ ಅಮಲಿನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ.
Published on: Jul 25, 2022 03:34 PM
Latest Videos