ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ

Edited By:

Updated on: Feb 24, 2026 | 4:02 PM

ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್​​ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ 7 ಜನ ಅಪ್ರಾಪ್ತರನ್ನು ಕೊಲೆ ಸಂಬಂಧ ಬಂಧಿಸಲಾಗಿದೆ

ಶಿವಮೊಗ್ಗ, (ಫೆಬ್ರವರಿ 24): ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್​​ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ 7 ಜನ ಅಪ್ರಾಪ್ತರನ್ನು ಕೊಲೆ ಸಂಬಂಧ ಬಂಧಿಸಲಾಗಿದೆ. ಕ್ರಿಕೆಟ್ ಆಟದಲ್ಲಿ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಗಿರೀಶ್ ಜೊತೆ ಆರೋಪಿಗಳು ಕ್ರಿಕೆಟ್ ಆಟವಾಡಿದ್ದ ಹಿನ್ನೆಲೆಯಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಸಂಕೇತ್ ಗಲಾಟೆ ಬಿಡಿಸಲು ತೆರಳಿದ್ದ. ಆ ವೇಳೆ ಸಂಕೇತ್ ಮರ್ಡರ್ ಆಗಿದೆ. ಕೈಯಲ್ಲಿ ಗುದ್ದಿ ಹಲ್ಲೆ ಮಾಡಿರುವ ಹಿನ್ನೆಲೆಯಲ್ಲಿ ಸಾವಾಗಿದೆ. ಕಳೆದೆರೆಡು ದಿನಗಳ ಹಿಂದೆಯಷ್ಟೇ ಕ್ರಿಕೆಟ್ ಆಟ ಆಡಿದ್ದರು. ಈ ಹಿನ್ನೆಲೆಯಲ್ಲಿ ಗಲಾಟೆ ನಡೆದು ಕೊಲೆ ನಡೆದಿದೆ. ಕೊಲೆ ಮಾಡಿರುವ ಅಪ್ರಾಪ್ತ ಬಾಲಕರ ಗಾಂಜಾ ಸೇವನೆ ಬಗ್ಗೆ ಪರೀಕ್ಷೆ ನಡೆಸಲಾಗುವುದು. ಊರುಗಡೂರಿನಲ್ಲಿ ವಿಶೇಷ ಬೀಟ್ ವ್ಯವಸ್ಥೆ ಮಾಡಲಾಗುವುದು. ಔಟ್ ಪೊಸ್ಟ್ ತೆರೆಯಲು ಕೂಡ ಕ್ರಮ ವಹಿಸಲಾಗಿದೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಕೊಲೆ ಪ್ರಕರಣ: 15 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More