ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಸಾವನ್ನಪ್ಪಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ. ಆಟವಾಡುತ್ತಿದ್ದಾಗ ಕುಸಿದು ಬಿದ್ದ ತ್ರಿಲೋಕ್‌ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಇದು ಹಠಾತ್ ನಿಧನವೋ ಅಥವಾ ಆರೋಗ್ಯ ಸಮಸ್ಯೆಯಿತ್ತೇ ಎಂಬ ಕುರಿತು ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಇದು ಹೃದಯಾಘಾತದಿಂದ ಸಂಭವಿಸಿದ ಹಠಾತ್ ನಿಧನವೋ ಅಥವಾ ತ್ರಿಲೋಕ್‌ಗೆ ಈ ಹಿಂದೆ ಯಾವುದಾದರೂ ಹೃದಯ ಸಂಬಂಧಿ ಕಾಯಿಲೆ ಇತ್ತೇ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
