AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಚ್ ಆನ್ ಮಾಡಿದ್ರೆ ನೀರು ಬರುತ್ತೆ, ಆದ್ರೆ ಅಧಿಕಾರಿಗಳು ಆನ್ ಮಾಡಲ್ಲ: 2 ವರ್ಷಗಳಿಂದ ಕುಡಿಯುವ ನೀರಿಲ್ಲದೆ ಪರದಾಡುತ್ತಿರುವ ಕುಂಟುಗೋಡು ಜನತೆ

ಸ್ವಿಚ್ ಆನ್ ಮಾಡಿದ್ರೆ ನೀರು ಬರುತ್ತೆ, ಆದ್ರೆ ಅಧಿಕಾರಿಗಳು ಆನ್ ಮಾಡಲ್ಲ: 2 ವರ್ಷಗಳಿಂದ ಕುಡಿಯುವ ನೀರಿಲ್ಲದೆ ಪರದಾಡುತ್ತಿರುವ ಕುಂಟುಗೋಡು ಜನತೆ

ಬಸವರಾಜ್​ ಯರಗಣವಿ
| Edited By: |

Updated on:Oct 27, 2026 | 9:33 PM

Share

ಶಿವಮೊಗ್ಗ ಜಿಲ್ಲೆಯ ಕುಂಟುಗೋಡು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಬೋರ್‌ವೆಲ್ ಕೊರೆದು, ನಲ್ಲಿ ಸಂಪರ್ಕ ಕಲ್ಪಿಸಿದ್ದರೂ ಕಳೆದ ಎರಡು ವರ್ಷಗಳಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಸಿದ್ಧವಿದ್ದ ವ್ಯವಸ್ಥೆ ಬಳಸಿಕೊಳ್ಳಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶಿವಮೊಗ್ಗ, ಅ.27: ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಟುಗೋಡು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವಾಗ, ಈ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೋರ್‌ವೆಲ್ ಕೊರೆದು, ವಿದ್ಯುತ್ ಸಂಪರ್ಕ ಕಲ್ಪಿಸಿ, ಮನೆ ಮನೆಗೆ ನಲ್ಲಿ ಅಳವಡಿಸಲಾಗಿದೆ. ಆದರೆ, ಪಿಡಿಓ ಸೌಮ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿಲ್ಲ. ಕೇವಲ ಸ್ವಿಚ್ ಆನ್ ಮಾಡಿದರೆ ಗ್ರಾಮಕ್ಕೆ ನೀರು ಸರಬರಾಜಾಗಬೇಕಿದ್ದರೂ, ಅಧಿಕಾರಿಗಳು ನಿರ್ವಹಣೆಯ ಜವಾಬ್ದಾರಿ ವಹಿಸಿಲ್ಲ. ಗ್ರಾಮಸ್ಥರು ಹಲವು ಬಾರಿ ದೂರು ನೀಡಿದರೂ ಪಿಡಿಓ ಸೌಮ್ಯ ಗಮನಹರಿಸಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಸಿಇಒ ಅವರು ಮಧ್ಯಪ್ರವೇಶಿಸಿ ಕೂಡಲೇ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 27, 2026 09:33 PM

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More