Kichcha Sudeep: ಚಿತ್ರರಂಗದಲ್ಲಿ 27 ವರ್ಷ ಪೂರೈಸಿದ ಕಿಚ್ಚ ಸುದೀಪ್​ಗೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಶಿವಣ್ಣ-ಗೀತಾ ದಂಪತಿ

Updated on: Feb 02, 2023 | 9:40 PM

Shivarajkumar | Geetha Shivarajkumar: ಸ್ಯಾಂಡಲ್​ವುಡ್​ನಲ್ಲಿ ಸುದೀಪ್​ ಅವರಿಗೆ ಇರುವ ಅನುಭವ ಅಪಾರ. ಅವರ ಮುಂದಿನ ಪಯಣಕ್ಕೆ ಶಿವರಾಜ್​ಕುಮಾರ್​ ಮತ್ತು ಗೀತಾ ದಂಪತಿ ಶುಭ ಕೋರಿದ್ದಾರೆ.

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ಹೀರೋ ಆಗಿ ಮಿಂಚುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಅವರು 27 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಇಂದು (ಫೆ.2) ಸುದೀಪ್​ ಕ್ರಿಕೆಟ್​ ಆಡುತ್ತಿದ್ದ ಮೈದಾನಕ್ಕೆ ಶಿವರಾಜ್​ಕುಮಾರ್ (Shivarajkumar)​ ಮತ್ತು ಗೀತಾ ದಂಪತಿ ಭೇಟಿ ನೀಡಿದರು. ಈ ವೇಳೆ ಕೇಕ್​ ಕತ್ತರಿಸಿ ಸುದೀಪ್​ಗೆ ಅವರು ಶುಭ ಕೋರಿದರು. ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಅವರ ಕಾಲಿಗೆ ನಮಸ್ಕರಿಸಿ ಸುದೀಪ್ ಆಶೀರ್ವಾದ ಪಡೆದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More