ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
ಪುನೀತ್ ರಾಜ್ಕುಮಾರ್ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಕುಟುಂಬದವರು ಸಮಾಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಭಾವುಕರಾದರು. ಪುನೀತ್ ರಾಜ್ಕುಮಾರ್ ಅವರು ಇಂದು ನಮ್ಮ ಜೊತೆ ಇದ್ದಿದ್ದರೆ ಅದ್ದೂರಿಯಾಗಿ ಬರ್ತ್ಡೇ ಆಚರಣೆ ಮಾಡಿಕೊಳ್ಳುತ್ತಿದ್ದರು. ಆದರೆ, ಅವರು ಇಲ್ಲದೆ ನೋವು ಅತಿಯಾಗಿ ಕಾಡುತ್ತಾ ಇದೆ.
ಶಿವರಾಜ್ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಇಂದು (ಮಾರ್ಚ್ 17) ಪುನೀತ್ ಸಮಾಧಿಗೆ ಭೇಟಿ ಕೊಟ್ಟಿದ್ದಾರೆ. ಇಂದು ಪುನೀತ್ ಜನ್ಮದಿನ. ಹೀಗಾಗಿ, ಸಹೋದರನಿಗೆ ಗೌರವ ಸಲ್ಲಿಸಲು ಶಿವಣ್ಣ ಆಗಮಿಸಿದ್ದರು. ಶಿವರಾಜ್ಕುಮಾರ್ ಅವರು ಪುನೀತ್ ಸಮಾಧಿಯನ್ನು ನೋಡಿ ಭಾವುಕರಾದರು. ಅವರು ಅಗಲಿದ ಪುನೀತ್ಗೆ ನಮನ ಸಲ್ಲಿಸಿ ಅಲ್ಲಿಂದ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos