ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ

Updated on: Mar 17, 2025 | 4:22 PM

ಪುನೀತ್ ರಾಜ್​ಕುಮಾರ್ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಕುಟುಂಬದವರು ಸಮಾಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಭಾವುಕರಾದರು. ಪುನೀತ್ ರಾಜ್​ಕುಮಾರ್ ಅವರು ಇಂದು ನಮ್ಮ ಜೊತೆ ಇದ್ದಿದ್ದರೆ ಅದ್ದೂರಿಯಾಗಿ ಬರ್ತ್​​ಡೇ ಆಚರಣೆ ಮಾಡಿಕೊಳ್ಳುತ್ತಿದ್ದರು. ಆದರೆ, ಅವರು ಇಲ್ಲದೆ ನೋವು ಅತಿಯಾಗಿ ಕಾಡುತ್ತಾ ಇದೆ.

ಶಿವರಾಜ್​ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಇಂದು (ಮಾರ್ಚ್ 17) ಪುನೀತ್ ಸಮಾಧಿಗೆ ಭೇಟಿ ಕೊಟ್ಟಿದ್ದಾರೆ. ಇಂದು ಪುನೀತ್ ಜನ್ಮದಿನ. ಹೀಗಾಗಿ, ಸಹೋದರನಿಗೆ ಗೌರವ ಸಲ್ಲಿಸಲು ಶಿವಣ್ಣ ಆಗಮಿಸಿದ್ದರು. ಶಿವರಾಜ್​ಕುಮಾರ್ ಅವರು ಪುನೀತ್​ ಸಮಾಧಿಯನ್ನು ನೋಡಿ ಭಾವುಕರಾದರು. ಅವರು ಅಗಲಿದ ಪುನೀತ್​ಗೆ ನಮನ ಸಲ್ಲಿಸಿ ಅಲ್ಲಿಂದ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More