ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ

Updated on: Jun 01, 2025 | 9:35 AM

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಹಾಗೂ ಕ್ರಿಕೆಟರ್ ಸುರೇಶ್ ರೈನಾ ಅವರು ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಈ ಕ್ಷಣ ತುಂಬ ವಿಶೇಷವಾಗಿತ್ತು. ‘ಓಂ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ಲಾಂಗ್ ಹಿಡಿದ ಸ್ಟೈಲ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಅದನ್ನು ಈಗ ಸುರೇಶ್​ ರೈನಾಗೆ ಶಿವಣ್ಣ ಕಲಿಸಿಕೊಟ್ಟಿದ್ದಾರೆ.

ನಟ ಶಿವರಾಜ್​ಕುಮಾರ್ (Shivarajkumar) ಮತ್ತು ಕ್ರಿಕೆಟರ್ ಸುರೇಶ್ ರೈನಾ ಅವರು ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭ ಸಖತ್ ವಿಶೇಷವಾಗಿತ್ತು. ‘ಓಂ’ ಸಿನಿಮಾದಲ್ಲಿ ಶಿವಣ್ಣ (Shivanna) ಲಾಂಗ್ ಹಿಡಿದ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದರು. ಆ ರೀತಿ ಲಾಂಗ್ ಹಿಡಿಯುವುದು ಹೇಗೆ ಎಂಬುದನ್ನು ಸುರೇಶ್​ ರೈನಾಗೆ ಶಿವಣ್ಣ ಹೇಳಿಕೊಟ್ಟಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿದ್ದಕ್ಕೆ ಸುರೇಶ್ ರೈನಾ (Suresh Raina) ತುಂಬ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More