‘ಯಾರನ್ನು ಹೊಗಳಬೇಕು ಅನ್ನೋದೇ ಗೊತ್ತಾಗ್ತಾ ಇಲ್ಲ’; ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನೋಡಿ ಶಿವಣ್ಣ ಮೆಚ್ಚುಗೆ

Updated on: Jul 25, 2023 | 8:12 AM

ಶಿವಣ್ಣ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನೋಡಿದ್ದಾರೆ. ಈ ಸಿನಿಮಾ ನೋಡಿದ ಅವರಿಗೆ ಸಖತ್ ಖುಷಿ ಆಗಿದೆ. ಅವರು ಚಿತ್ರತಂಡವನ್ನು ಬಾಯ್ತುಂಬ ಹೊಗಳಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ಅವರು ಹೊಸ ಪ್ರತಿಭೆಗಳಿಗೆ ಸಪೋರ್ಟ್ ಮಾಡುತ್ತಾರೆ. ಈಗ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನೋಡಿದ್ದಾರೆ. ಈ ಸಿನಿಮಾ ನೋಡಿದ ಅವರಿಗೆ ಸಖತ್ ಖುಷಿ ಆಗಿದೆ. ಅವರು ಚಿತ್ರತಂಡವನ್ನು ಬಾಯ್ತುಂಬ ಹೊಗಳಿದ್ದಾರೆ. ‘ನಿಜಕ್ಕೂ ಯಾರನ್ನು ಹೊಗಳಬೇಕು ಅನ್ನೋದೇ ಗೊತ್ತಾಗುತ್ತಿಲ್ಲ. ಎಲ್ಲರೂ ಚೆನ್ನಾಗಿ ಮಾಡಿದ್ದಾರೆ. ಇದೊಂದು ಟೀಂ ವರ್ಕ್​. ಒಂದು ರಾತ್ರಿ, ಒಂದೇ ಲೋಕೆಷನ್​ನಲ್ಲಿ ನಡೆಯುವ ಕಥೆಯನ್ನು ಇಷ್ಟು ಚೆನ್ನಾಗಿ ತೋರಿಸಿದ್ದಾರೆ ಎಂದರೆ ನಂಬೋಕೆ ಆಗಲ್ಲ’ ಎಂದಿದ್ದಾರೆ ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More