‘ನಮ್ಮ ಇಂಡಸ್ಟ್ರಿ ಪರವಾಗಿ ಸಿದ್ದಾರ್ಥ್ಗೆ ನಾನು ಕ್ಷಮೆ ಕೇಳುತ್ತೇನೆ’; ನೇರ ಮಾತಲ್ಲಿ ಹೇಳಿದ ಶಿವಣ್ಣ
ಬಂದ್ ಪ್ರತಿಭಟನೆಯಲ್ಲಿ ಭಾಗಿಯಾದ ಶಿವಣ್ಣ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್ 28ರಂದು ತಮಿಳು ನಟ ಸಿದ್ದಾರ್ಥ್ ಅವರು ಬೆಂಗಳೂರಿಗೆ ಬಂದಿದ್ದರು. ಅವರ ಸುದ್ದಿಗೋಷ್ಠಿಗೆ ಅಡ್ಡಿ ಮಾಡಲಾಯಿತು. ಇದು ಸರಿ ಅಲ್ಲ ಎಂದು ಶಿವಣ್ಣ ಹೇಳಿದ್ದಾರೆ.
ಕರ್ನಾಟಕ ಬಂದ್ಗೆ ಚಿತ್ರರಂಗ ಬೆಂಬಲ ನೀಡಿದೆ. ಬೆಂಗಳೂರಿನ ಫಿಲಂ ಚೇಂಬರ್ ಬಳಿ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಇಲ್ಲಿಗೆ ತೆರಳಿದ ಶಿವಣ್ಣ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್ 28ರಂದು ತಮಿಳು ನಟ ಸಿದ್ದಾರ್ಥ್ (Siddharth) ಅವರು ಬೆಂಗಳೂರಿಗೆ ಬಂದಿದ್ದರು. ಅವರ ಸುದ್ದಿಗೋಷ್ಠಿಗೆ ಅಡ್ಡಿ ಮಾಡಲಾಯಿತು. ಇದು ಸರಿ ಅಲ್ಲ ಎಂದು ಶಿವಣ್ಣ ಹೇಳಿದ್ದಾರೆ. ‘ಸಿದ್ದಾರ್ಥ್ ಸುದ್ದಿಗೋಷ್ಠಿಗೆ ಅಡ್ಡಿ ಮಾಡಲಾಯಿತು. ಇದು ಸರಿ ಅಲ್ಲ. ನಮ್ಮ ಇಂಡಸ್ಟ್ರಿ ಪರವಾಗಿ ಸಿದ್ದಾರ್ಥ್ಗೆ ನಾನು ಕ್ಷಮೆ ಕೇಳುತ್ತೇನೆ’ ಎಂದರು. ‘ಇನ್ನುಮುಂದೆ ಈ ರೀತಿ ಆಗಲ್ಲ’ ಎಂದು ಅವರು ಭರವಸೆ ನೀಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ