ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಪ್ರಚಾರಕ್ಕೆ ಇಳಿದ ಶಿವರಾಜ್ಕುಮಾರ್
ಶಿವರಾಜ್ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಒಂದು ದಿನ ಅವರು ಅಲ್ಲಿಯೇ ಇದ್ದು ಚಿಕಿತ್ಸೆ ಪಡೆದು ಬಂದಿದ್ದರು. ಈಗ ಅವರು ಮತ್ತೆ ಚುನಾವಣೆ ಪ್ರಚಾರಕ್ಕೆ ಇಳಿದಿದ್ದಾರೆ. ಶಿವಮೊಗ್ಗದಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ನಿರಂತರವಾಗಿ ಅವರು ಚುನಾವಣೆ ಪ್ರಚಾರದಲ್ಲಿ ಇದ್ದ ಕಾರಣ ಅವರಿಗೆ ಸುಸ್ತ್ ಆಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಒಂದು ದಿನ ಅವರು ಅಲ್ಲಿಯೇ ಇದ್ದು ಚಿಕಿತ್ಸೆ ಪಡೆದು ಬಂದಿದ್ದರು. ಈಗ ಅವರು ಮತ್ತೆ ಚುನಾವಣೆ ಪ್ರಚಾರಕ್ಕೆ ಇಳಿದಿದ್ದಾರೆ. ಶಿವಮೊಗ್ಗದಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ. ‘ಶಿವರಾಜ್ಕುಮಾರ್ ಆಗಿ ಅಲ್ಲ ಗೀತನ ಗಂಡ ಆಗಿ ಬಂದಿದ್ದೇನೆ’ ಎಂದಿದ್ದಾರೆ ಅವರು. ಇದಕ್ಕೆ ಶಿಳ್ಳೆ ಬಿದ್ದಿದೆ. ಶಿವಮೊಗ್ಗ ಲೋಕಸಭೆಯಿಂದ ಕಾಂಗ್ರೆಸ್ ಪರವಾಗಿ ಗೀತಾ ಅವರು ಸ್ಪರ್ಧೆ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos