ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಪ್ರಚಾರಕ್ಕೆ ಇಳಿದ ಶಿವರಾಜ್​ಕುಮಾರ್

Updated on: Apr 09, 2024 | 8:04 AM

ಶಿವರಾಜ್​ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಒಂದು ದಿನ ಅವರು ಅಲ್ಲಿಯೇ ಇದ್ದು ಚಿಕಿತ್ಸೆ ಪಡೆದು ಬಂದಿದ್ದರು. ಈಗ ಅವರು ಮತ್ತೆ ಚುನಾವಣೆ ಪ್ರಚಾರಕ್ಕೆ ಇಳಿದಿದ್ದಾರೆ. ಶಿವಮೊಗ್ಗದಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ನಿರಂತರವಾಗಿ ಅವರು ಚುನಾವಣೆ ಪ್ರಚಾರದಲ್ಲಿ ಇದ್ದ ಕಾರಣ ಅವರಿಗೆ ಸುಸ್ತ್ ಆಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಒಂದು ದಿನ ಅವರು ಅಲ್ಲಿಯೇ ಇದ್ದು ಚಿಕಿತ್ಸೆ ಪಡೆದು ಬಂದಿದ್ದರು. ಈಗ ಅವರು ಮತ್ತೆ ಚುನಾವಣೆ ಪ್ರಚಾರಕ್ಕೆ ಇಳಿದಿದ್ದಾರೆ. ಶಿವಮೊಗ್ಗದಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ. ‘ಶಿವರಾಜ್​ಕುಮಾರ್ ಆಗಿ ಅಲ್ಲ ಗೀತನ ಗಂಡ ಆಗಿ ಬಂದಿದ್ದೇನೆ’ ಎಂದಿದ್ದಾರೆ ಅವರು. ಇದಕ್ಕೆ ಶಿಳ್ಳೆ ಬಿದ್ದಿದೆ. ಶಿವಮೊಗ್ಗ ಲೋಕಸಭೆಯಿಂದ ಕಾಂಗ್ರೆಸ್ ಪರವಾಗಿ ಗೀತಾ ಅವರು ಸ್ಪರ್ಧೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More