ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

Edited By:

Updated on: Dec 25, 2025 | 8:53 PM

ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದೂರು ನೀಡಿದ್ದಾರೆ. ಈ ಮೊದಲು ನಟಿ ರಮ್ಯಾಗೆ ಇದೇ ರೀತಿ ಕೆಟ್ಟ ಕಮೆಂಟ್ ಬಂದಿತ್ತು. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾನ್ಸ್ ವಾರ್ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಎಲ್ಲ ಅಭಿಮಾನಿಗಳಲ್ಲೂ ನಾನು ಕೇಳಿಕೊಳ್ಳುತ್ತೇನೆ. ಒಬ್ಬರಿಂದ ಇನ್ನೊಬ್ಬರಿಗೆ ಆ ಕಿಡಿ ಹಾರಬಾರದು. ಅದು ತುಂಬಾ ಅಪಾಯಕಾರಿ. ಅಂಥ ಕಮೆಂಟ್ ಮಾಡಿದರೆ ಪೊಲೀಸ್ ಕೇಸ್ ಆಗುತ್ತದೆ. ಯಾಕೆ ಇದೆಲ್ಲ. ಎಲ್ಲರಿಗೂ ಫ್ಯಾಮಿಲಿ ಇರುತ್ತದೆ. ಯಾವ ಹೆಣ್ಣಿನ ಬಗ್ಗೆ ಆದರೂ ಕೆಟ್ಟ ಕಮೆಂಟ್ ಮಾಡುವುದು ತಪ್ಪು. ಮಹಿಳೆಯರನ್ನು ಗೌರವಿಸಬೇಕು’ ಎಂದು ಶಿವರಾಜ್​​ಕುಮಾರ್ (Shivarajkumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More