ಅಮೆರಿಕದಲ್ಲಿ ಪಂಚೆ ಧರಿಸಿ ಡ್ಯಾನ್ಸ್​ ಮಾಡಿದ ಶಿವಣ್ಣ; ಇಲ್ಲಿದೆ ನೋಡಿ ವೈರಲ್​ ವಿಡಿಯೋ

Updated on: Sep 03, 2023 | 8:52 AM

ಅಮೆರಿಕದ ಟೆಕ್ಸಾಸ್​ನಲ್ಲಿ ‘ನಾವಿಕ ವಿಶ್ವ ಕನ್ನಡ ಸಮಾವೇಶ’ ನಡೆಯುತ್ತಿದೆ. ಇದರಲ್ಲಿ ಶಿವರಾಜ್​ಕುಮಾರ್​ ಅವರು ಭಾಗವಹಿಸಿದ್ದಾರೆ. ವೇದಿಕೆ ಮೇಲೆ ಅವರು ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ್ದಾರೆ. ಪಂಚೆ ಧರಿಸಿ ಅವರು ಕುಣಿದ ಪರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಶಿವಣ್ಣನ ಎನರ್ಜಿ ಕಂಡು ಎಲ್ಲರೂ ವಾವ್​ ಎನ್ನುತ್ತಿದ್ದಾರೆ.

ನಟ ಶಿವರಾಜ್​ಕುಮಾರ್ (Shivarajkumar)​ ಇದ್ದಲ್ಲಿ ಎನರ್ಜಿ ಇರುತ್ತದೆ. ವಯಸ್ಸು 60 ದಾಟಿದ್ದರೂ ಕೂಡ ಅವರ ಹುಮ್ಮಸ್ಸು ಕಿಂಚಿತ್ತೂ ಕಡಿಮೆ ಆಗಿಲ್ಲ. ಹದಿಹರೆಯದ ಹುಡುಗರಿಗೂ ಪೈಪೋಟಿ ನೀಡುವಂತೆ ಶಿವಣ್ಣ ಡ್ಯಾನ್ಸ್​ (Shivarajkumar Dance) ಮಾಡುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಅಮೆರಿಕದ ಟೆಕ್ಸಾಸ್​ನಲ್ಲಿ ‘ನಾವಿಕ ವಿಶ್ವ ಕನ್ನಡ ಸಮಾವೇಶ’ (Navika World Kannada Summit) ನಡೆಯುತ್ತಿದೆ. ಸೆಪ್ಟೆಂಬರ್​ 1ರಿಂದ ಸೆಪ್ಟೆಂಬರ್​ 3ರ ತನಕ ಈ ಸಮಾರಂಭ ನಡೆಯಲಿದೆ. ಇದರಲ್ಲಿ ಶಿವರಾಜ್​ಕುಮಾರ್​ ಅವರು ಭಾಗವಹಿಸಿದ್ದಾರೆ. ವೇದಿಕೆ ಮೇಲೆ ಅವರು ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ್ದಾರೆ. ಪಂಚೆ ಧರಿಸಿ ಅವರು ಕುಣಿದ ಪರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಶಿವಣ್ಣನ ಎನರ್ಜಿ ಕಂಡು ಎಲ್ಲರೂ ವಾವ್​ ಎನ್ನುತ್ತಿದ್ದಾರೆ. ‘ಘೋಸ್ಟ್​’, ‘ಕರಟಕ ದಮನಕ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವರಾಜ್​ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. ಆ ಕೆಲಸಗಳ ನಡುವೆಯೂ ಅವರು ‘ನಾವಿಕ ವಿಶ್ವ ಕನ್ನಡ ಸಮಾವೇಶ’ದಲ್ಲಿ ಭಾಗಿಯಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Sep 03, 2023 08:52 AM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More