ಚಿತ್ರಮಂದಿರದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ ಶಿವರಾಜ್ಕುಮಾರ್
ಭಾನುವಾರ (ನವೆಂಬರ್ 14) ಶಿವರಾಜ್ಕುಮಾರ್ ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ 15 ದಿನ ಮೇಲಾದರೂ ಪ್ರೇಕ್ಷಕರು ಚಿತ್ರಮಂದಿರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಸಿನಿಮಾ ರಿಲೀಸ್ ಆದ ದಿನವೇ ಪುನೀತ್ ನಿಧನ ಹೊಂದಿದ್ದರು. ಹೀಗಾಗಿ ಅಭಿಮಾನಿಗಳ ಜತೆ ಸಿನಿಮಾ ನೋಡೋಕೆ ಶಿವಣ್ಣನಿಗೆ ಸಾಧ್ಯವಾಗಿರಲಿಲ್ಲ. ಈ ಕಾರಣಕ್ಕೆ ಭಾನುವಾರ (ನವೆಂಬರ್ 14) ಶಿವರಾಜ್ಕುಮಾರ್ ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದಾರೆ.
‘ಈ ನೋವಿನಲ್ಲೂ ಅಭಿಮಾನಿಗಳು ‘ಭಜರಂಗಿ 2’ ನೋಡುತ್ತಿದ್ದಾರೆ. ನಮ್ಮ ಕಷ್ಟದಲ್ಲಿ ಅಭಿಮಾನಿಗಳು ಜೊತೆಯಾಗಿದ್ದಾರೆ. ಈ ಕಷ್ಟದ ಸಮಯದಲ್ಲೂ ಚಿತ್ರ ನೋಡಿ ನಮ್ಮ ಜೊತೆ ಅಭಿಮಾನಿಗಳು ನಿಂತಿದ್ದಾರೆ. ಪ್ರೇಕ್ಷಕರು ನಮಗೆ ನೀಡಿರುವ ಈ ಬೆಂಬಲಕ್ಕೆ ತುಂಬು ಹೃದಯದ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಶಿವರಾಜ್ಕುಮಾರ್ ಈ ಮೊದಲು ಹೇಳಿದ್ದರು.
ಇದನ್ನೂ ಓದಿ: ಅಭಿಮಾನಿಗಳ ಪ್ರೀತಿಗೆ ಮಾತೇ ಬರುತ್ತಿಲ್ಲ ಎಂದ ಶಿವರಾಜ್ಕುಮಾರ್