‘ತೆಲುಗಿನಲ್ಲಿ ಲೀಡ್ ರೋಲ್ ಮಾಡ್ತಾ ಇದೀನಿ’; ಮಾಹಿತಿ ಹಂಚಿಕೊಂಡ ಶಿವಣ್ಣ
‘ಜೈಲರ್’ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಈ
ಶಿವರಾಜ್ಕುಮಾರ್ (Shivarajkumar) ಅವರ 125ನೇ ಸಿನಿಮಾ ‘ವೇದ’ ಚಿತ್ರ ಡಿಸೆಂಬರ್ 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಶಿವರಾಜ್ಕುಮಾರ್ ಅವರು ತಮಿಳಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದಲ್ಲಿ (Jailer Movie) ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಈ ಬಗ್ಗೆ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Latest Videos