AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ ಡ್ರೈವ್ ಮಾಡಿ ತೆರಳಿದ ಶಿವರಾಜ್​ಕುಮಾರ್; ಅವರು ಇಷ್ಟೆಲ್ಲ ಮಾಡಿದ್ದು ಯಾರಿಗೆ?

ಕಾರ್​ ಡ್ರೈವ್ ಮಾಡಿ ತೆರಳಿದ ಶಿವರಾಜ್​ಕುಮಾರ್; ಅವರು ಇಷ್ಟೆಲ್ಲ ಮಾಡಿದ್ದು ಯಾರಿಗೆ?

ರಾಜೇಶ್ ದುಗ್ಗುಮನೆ
|

Updated on: May 27, 2023 | 12:16 PM

Share

ಮಧು ಬಂಗಾರಪ್ಪ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನವೂ ಸಿಗುತ್ತಿದೆ. ಈ ವಿಚಾರ ಶಿವರಾಜ್​ಕುಮಾರ್ ಅವರಿಗೆ ಖುಷಿ ತಂದಿದೆ.

ನಟ ಶಿವರಾಜ್​ಕುಮಾರ್ (Shivarajkumar) ನಟನೆಯ ಜೊತೆಗೆ ರಾಜಕೀಯದ ಜೊತೆಗೂ ನಂಟು ಬೆಳೆಸಿಕೊಂಡಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡ ನಂತರ ಶಿವಣ್ಣ ಕೂಡ ಪ್ರಚಾರದಲ್ಲಿ ಭಾಗಿ ಆದರು. ಸೊರಬದ ಮಧು ಬಂಗಾರಪ್ಪ ಪರ ಅವರು ಭರ್ಜರಿ ಪ್ರಚಾರ ಮಾಡಿದ್ದರು. ಮಧು ಬಂಗಾರಪ್ಪ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನವೂ ಸಿಗುತ್ತಿದೆ. ಈ ವಿಚಾರ ಶಿವರಾಜ್​ಕುಮಾರ್ ಅವರಿಗೆ ಖುಷಿ ತಂದಿದೆ. ಶಿವಣ್ಣ, ಗೀತಾ ಶಿವರಾಜ್​ಕುಮಾರ್ ಹಾಗೂ ಮಧು ಬಂಗಾರಪ್ಪ ಒಂದೇ ಕಾರಲ್ಲಿ ತೆರಳಿದ್ದಾರೆ. ಈ ವೇಳೆ ಶಿವಣ್ಣ (Shivanna) ಕಾರು ಡ್ರೈವ್ ಮಾಡಿದ್ದು ವಿಶೇಷವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More