ಪೊಲೀಸರ ಜತೆ ಮಸ್ತ್ ಡ್ಯಾನ್ಸ್ ಮಾಡಿದ ಶಿವಣ್ಣ

| Updated By: ರಾಜೇಶ್ ದುಗ್ಗುಮನೆ

Updated on: May 02, 2022 | 7:44 PM

ಮಂಗಳೂರು ನಗರ ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಶಿವರಾಜ್​ಕುಮಾರ ಡ್ಯಾನ್ಸ್ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಶಿವರಾಜ್​ಕುಮಾರ್ ಅವರ ಎನರ್ಜಿ ಕಂಡು ಪೊಲೀಸರು ಹಾಗೂ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ನಟ ಶಿವರಾಜ್​ಕುಮಾರ್ ಅವರಿಗೆ (Shivarajkumar) ಸಖತ್ ಎನರ್ಜಿ ಇದೆ. ವಯಸ್ಸು 60 ಸಮೀಪಿಸಿದರೂ ಅವರು ಯುವಕರನ್ನೂ ನಾಚಿಸುವಂತಹ ಎನರ್ಜಿ ಇಟ್ಟುಕೊಂಡಿದ್ದಾರೆ. ಅವರು ಈಗ ಪೊಲೀಸರ (Police) ಜತೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಮಂಗಳೂರಿಗೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ತೆರಳಿದ್ದು, ಸಂವಾದದಲ್ಲಿ ಪಾಲ್ಗೊಂಡರು. ಈ ವೇಳೆ ಪೊಲೀಸರ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು. ಬಳಿಕ ಶಿವಣ್ಣ ಹಾಡು ಹಾಡಿ, ಡ್ಯಾನ್ಸ್ ಮಾಡಿದರು. ಮಂಗಳೂರು ನಗರ ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಶಿವರಾಜ್​ಕುಮಾರ್ ಡ್ಯಾನ್ಸ್ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಶಿವರಾಜ್​ಕುಮಾರ್ ಅವರ ಎನರ್ಜಿ ಕಂಡು ಪೊಲೀಸರು ಹಾಗೂ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ‘ಜೇಮ್ಸ್​’ ಸಿನಿಮಾ ನೋಡಿ ಕಣ್ಣೀರು ಹಾಕಿದ ಗೀತಾ ಶಿವರಾಜ್​ಕುಮಾರ್​; ಇಲ್ಲಿದೆ ವಿಡಿಯೋ.. 

‘ಮಗಳ ಪ್ರೊಡಕ್ಷನ್​ನಲ್ಲಿ ನಾನೂ ಒಂದು ವೆಬ್ ಸೀರಿಸ್ ಮಾಡ್ತಾ ಇದೀನಿ’; ಶಿವರಾಜ್​ಕುಮಾರ್ ಅಚ್ಚರಿಯ ಘೋಷಣೆ