‘ಭಜರಂಗಿ 2’ಗೆ ಗೆಲುವು ಸಿಗಲಿ ಎಂದು ಫ್ಯಾನ್ಸ್ ಹರಕೆ; ವಿಡಿಯೋ ಕಾಲ್ ಮಾಡಿ ಮಾತನಾಡಿದ ಶಿವರಾಜ್ಕುಮಾರ್
‘ಭಜರಂಗಿ-2’ಗೆ ಭರ್ಜರಿ ಸಕ್ಸಸ್ ಸಿಗಲಿ ಅಂತ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಮುತ್ತತ್ತಿಗೆ ಹೋಗಿ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ.
‘ಭಜರಂಗಿ 2’ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ. ಅಕ್ಟೋಬರ್ 29ರಂದು ಸಿನಿಮಾ ತೆರೆಗೆ ಬರುತ್ತಿದೆ. ಸಿನಿಮಾ ಕಣ್ತುಂಬಿಕೊಳ್ಳಬೇಕು ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಅಭಿಮಾನಿಗಳು ಸಿನಿಮಾ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.
‘ಭಜರಂಗಿ-2’ಗೆ ಭರ್ಜರಿ ಸಕ್ಸಸ್ ಸಿಗಲಿ ಅಂತ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಮುತ್ತತ್ತಿಗೆ ಹೋಗಿ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ. ಡಾ. ರಾಜ್ಕುಮಾರ್ ಸ್ಮಾರಕದ ಮುಂದೆ ಭಜರಂಗಿ ಪೋಸ್ಟರ್ಗೆ ಹಾಲಿನಭಿಷೇಕ ಮಾಡಲಾಗಿದೆ. ಈ ದೃಶ್ಯವನ್ನು ಶಿವರಾಜ್ಕುಮಾರ್ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ್ದು ವಿಶೇಷವಾಗಿತ್ತು.
ನಿರ್ದೇಶಕ ಎ. ಹರ್ಷ ಮತ್ತು ಶಿವರಾಜ್ಕುಮಾರ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ನಿರೀಕ್ಷೆ ದೊಡ್ಡ ಮಟ್ಟದಲ್ಲಿದೆ. ಈ ಹಿಂದೆ ತೆರೆಕಂಡಿದ್ದ ‘ಭಜರಂಗಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ಹಾಗಾಗಿ ‘ಭಜರಂಗಿ 2’ ಈಗ ಸಖತ್ ಹೈಪ್ ಸೃಷ್ಟಿ ಮಾಡಿದೆ. ಈ ಬಾರಿ ಎ. ಹರ್ಷ ಯಾವ ರೀತಿ ಮೋಡಿ ಮಾಡಿದ್ದಾರೆ ಎಂಬುದನ್ನು ಚಿತ್ರಮಂದಿರದಲ್ಲಿ ನೋಡಿ ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ.
ಇದನ್ನೂ ಓದಿ: Bhajarangi 2: ಬಹುನಿರೀಕ್ಷಿತ ‘ಭಜರಂಗಿ 2’ ಚಿತ್ರದ ಟ್ರೇಲರ್ನಲ್ಲಿ ಡೈಲಾಗ್ಸ್ ಯಾಕಿಲ್ಲ?; ಇಲ್ಲಿದೆ ಉತ್ತರ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

