ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್: ಸನ್ಮಾನ ಮಾಡಿದ ಶಿವಣ್ಣ

Updated on: Oct 24, 2025 | 7:34 PM

ಚಿತ್ರರಂಗದಲ್ಲಿ ಹಿರಿಯ ನಟ ಸಾಯಿ ಕುಮಾರ್ ಅವರು ಆ್ಯಕ್ಟೀವ್ ಆಗಿದ್ದಾರೆ. ಬಣ್ಣದ ಲೋಕದಲ್ಲಿ ಅವರು ಐವತ್ತು ವರ್ಷಗಳನ್ನು ಪೂರೈಸಿದ್ದಾರೆ. ಈಗ ಅವರು ‘ಹಲ್ಕಾ ಡಾನ್’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಶಿವರಾಜ್​​ಕುಮಾರ್ ಕೂಡ ಆಗಮಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಬಹುಭಾಷೆಯ ಚಿತ್ರರಂಗದಲ್ಲಿ ಸಾಯಿ ಕುಮಾರ್ (Sai Kumar) ಅವರು ಆ್ಯಕ್ಟೀವ್ ಆಗಿದ್ದಾರೆ. ಬಣ್ಣದ ಲೋಕದಲ್ಲಿ ಅವರು 50 ವರ್ಷಗಳನ್ನು ಪೂರೈಸಿದ್ದಾರೆ. ‘ಹಲ್ಕಾ ಡಾನ್’ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದರು. ಈ ಚಿತ್ರದ ಸಮಾರಂಭ ಇಂದು (ಅ.24) ನಡೆಯಿತು. ಈ ವೇಳೆ ಶಿವರಾಜ್​​ಕುಮಾರ್ (Shivarajkumar) ಕೂಡ ಆಗಮಿಸಿದ್ದರು. ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್ ಅವರಿಗೆ ಶಿವಣ್ಣ ಸನ್ಮಾನ ಮಾಡಿದರು. ಸಾಯಿ ಕುಮಾರ್ ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಶಿವರಾಜ್​​ಕುಮಾರ್ ಅವರು ಶುಭ ಹಾರೈಸಿದರು. ಹಳೇ ನೆನಪುಗಳನ್ನು ಅವರು ಮೆಲುಕು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More