‘ನಾನೇ ಟಿಕೆಟ್ ಬುಕ್ ಮಾಡಿಕೊಂಡು ಟಾಕ್ಸಿಕ್ ನೋಡಿದೆ’: ಶಿವಣ್ಣ ಫಸ್ಟ್ ರಿಯಾಕ್ಷನ್

Updated on: Sep 03, 2026 | 8:27 PM

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾವನ್ನು ಶಿವರಾಜ್​ಕುಮಾರ್ ಅವರು ನೋಡಿದ್ದಾರೆ. ಸ್ವತಃ ಟಿಕೆಟ್ ಬುಕ್ ಮಾಡಿಕೊಂಡು ಬಂದು ಸಿನಿಮಾ ನೋಡಿರುವುದಾಗಿ ಅವರು ತಿಳಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅವರು ತಮ್ಮ ವಿಮರ್ಶೆ ಹಂಚಿಕೊಂಡರು. ಟಾಕ್ಸಿಕ್ ಸಿನಿಮಾ ಬಗ್ಗೆ ಶಿವಣ್ಣ ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾವನ್ನು ಶಿವರಾಜ್​ಕುಮಾರ್ ಅವರು ನೋಡಿದ್ದಾರೆ. ಸ್ವತಃ ಟಿಕೆಟ್ ಬುಕ್ ಮಾಡಿಕೊಂಡು ಬಂದು ಸಿನಿಮಾ ನೋಡಿರುವುದಾಗಿ ಅವರು ತಿಳಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅವರು ತಮ್ಮ ವಿಮರ್ಶೆ ಹಂಚಿಕೊಂಡರು. ಸಿನಿಮಾದಲ್ಲಿ ತಮಗೆ ಇಷ್ಟ ಆದ ಅಂಶಗಳು ಯಾವುವು ಎಂಬುದನ್ನು ಅವರು ವಿವರಿಸಿದರು. ‘ಇದು ಒಂದು ಒಳ್ಳೆಯ ಪ್ರಯತ್ನ. ಸೆಕೆಂಡ್ ಹಾಫ್ ಸಸ್ಪೆನ್ಸ್ ಚೆನ್ನಾಗಿದೆ. ಯಶ್ ಚೆನ್ನಾಗಿ ಕಾಣುತ್ತಿದ್ದಾರೆ. ಯಶ್ ನಮ್ಮ ಹುಡುಗ. ನನಗೆ ನನ್ನ ತಮ್ಮ ಮಾಡಿದಷ್ಟೇ ಖುಷಿ ಆಗುತ್ತದೆ. ಅವರಿಗೆ ನನ್ನ ಬೆಂಬಲ ಯಾವಾಗಲೂ ಇರುತ್ತದೆ. ಬ್ಯುಸಿ ಇದ್ದಿದ್ದರಿಂದ ಇಷ್ಟು ದಿನ ಸಿನಿಮಾ ನೋಡೋಕೆ ಆಗಿರಲಿಲ್ಲ. ನಿನ್ನೆ ನಾನೇ ಟಿಕೆಟ್ ಬುಕ್ ಮಾಡಿಕೊಂಡು ಇಂದು ಸಿನಿಮಾ ನೋಡಿದ್ದೇನೆ. ಶಿವರಾಜ್​ಕುಮಾರ್ ಆಗಿ ಅಥವಾ ಒಬ್ಬ ನಟನಾಗಿ ನಾನು ಸಿನಿಮಾ ನೋಡಿಲ್ಲ. ಒಬ್ಬ ಪ್ರೇಕ್ಷಕನಾಗಿ ನಾನು ಸಿನಿಮಾ ನೋಡಿದ್ದೇನೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More