ಆಪರೇಷನ್ ಬಳಿಕ ಶಿವರಾಜ್ಕುಮಾರ್ ಹೆಲ್ತ್ಅಪ್ಡೇಟ್ ನೀಡಿದ ವೈದ್ಯರು
ಶಿವರಾಜ್ಕುಮಾರ್ ಅವರಿಗೆ ಕ್ಯಾನ್ಸರ್ ಇದೆ. ಅಮೆರಿಕದ ಫ್ಲೋರಿಡಾದ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ. ಆರು ಗಂಟೆಗಳ ಕಾಲ ಆಪರೇಷನ್ ನಡೆದಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ. ರಾತ್ರಿ 11.30-12ರ ವೇಳೆಗೆ ಆಪರೇಷನ್ ಪೂರ್ಣಗೊಂಡಿದೆ. ಈ ಬಗ್ಗೆ ಈಗ ಹೆಲ್ತ್ ಅಪ್ಡೇಟ್ ಸಿಕ್ಕಿದೆ.
ಕ್ಯಾನ್ಸರ್ಗೆ ಶಿವರಾಜ್ಕುಮಾರ್ ಅವರು ಫ್ಲೋರಿಡಾದ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ. ಈಗ ವೈದ್ಯರು ಶಿವರಾಜ್ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ದೇವರ ದಯೆಯಿಂದ, ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಪ್ರಮುಖ ಹಂತ ಪೂರ್ಣಗೊಂಡಿದೆ. ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ. ಸರ್ಜರಿ ನಂತರವೂ ಆರಾಮಾಗಿದ್ದಾರೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ನಿಮ್ಮ ಬೆಂಬಲಕ್ಕೆ ಧನ್ಯವಾದ’ ಎಂದು ವೈದ್ಯರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 25, 2024 09:08 AM