ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್ಕುಮಾರ್
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರಿಗೆ ಅಮೆರಿಕದಲ್ಲೂ ಅಭಿಮಾನಿಗಳು ಇದ್ದಾರೆ. ಮಿಯಾಮಿಯಲ್ಲಿ ಇರುವ ಕನ್ನಡಿಗರನ್ನು ಶಿವಣ್ಣ ಭೇಟಿ ಮಾಡಿದ್ದಾರೆ. ಕನ್ನಡ ಸಿನಿಮಾದ ಗೀತೆಗಳನ್ನು ಹೇಳುವ ಮೂಲಕ ಅಭಿಮಾನಿಗಳಿಗೆ ಅವರು ಮನರಂಜನೆ ನೀಡಿದ್ದಾರೆ. ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿ ಅಮೆರಿಕದಲ್ಲಿನ ಕನ್ನಡಿಗರು ಸಖತ್ ಖುಷಿಪಟ್ಟಿದ್ದಾರೆ. ಈ ವೇಳೆ ಗೀತಾ ಶಿವರಾಜ್ಕುಮಾರ್ ಕೂಡ ಜೊತೆಗಿದ್ದರು.
ಚಿಕಿತ್ಸೆ ಸಲುವಾಗಿ ಅಮೆರಿಕಕ್ಕೆ ತೆರಳಿರುವ ಶಿವರಾಜ್ಕುಮಾರ್ ಅವರು ಅಲ್ಲಿನ ಕನ್ನಡಿಗರನ್ನು ಭೇಟಿ ಮಾಡಿದ್ದಾರೆ. ತಮ್ಮ ಸಿನಿಮಾದ ಹಾಡುಗಳನ್ನು ಹೇಳುವ ಮೂಲಕ ಎಲ್ಲರಿಗೂ ಮನರಂಜನೆ ನೀಡಿದ್ದಾರೆ. ಅಮೆರಿಕದಲ್ಲಿ ಶಿವಣ್ಣ ಅವರನ್ನು ಭೇಟಿ ಮಾಡಿದ ಅಭಿಮಾನಿಗಳು ತುಂಬ ಖುಷಿಪಟ್ಟಿದ್ದಾರೆ. ಜನವರಿ 26ರಂದು ಶಿವರಾಜ್ಕುಮಾರ್ ಅವರು ಭಾರತಕ್ಕೆ ವಾಪಸ್ ಬರಲಿದ್ದಾರೆ. ಅವರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.