ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್

Updated on: Feb 12, 2026 | 10:20 AM

ಶಿವರಾಜ್​​ಕುಮಾರ್ ಅವರಿಗೆ ಮಕ್ಕಳು ಅಂದರೆ ತುಂಬಾನೇ ಪ್ರೀತಿ. ಈಗ ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಅವರು ರಜನಿ ಆಪ್ತನ ಮಗಳಿಗೆ ಹೆಸರಿಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಜನಿ ಆಪ್ತನ ಮಗಳಿಗೆ ಆದ್ಯಾ ಎಂದು ನಾಮಕರಣ ಮಾಡಲಾಗಿದೆ.

ಶಿವರಾಜ್​​ಕುಮಾರ್ ಅವರಿಗೆ ಮಕ್ಕಳೆಂದರೆ ಪಂಚಪ್ರಾಣ. ಅವರು ಈಗ, ಕರ್ನಾಟಕ ರಾಜ್ಯ ರಜಿನಿಕಾಂತ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ರಜಿನಿ ಸಂತೋಷ್ ಅವರ ಮಗಳಿಗೆ ನಾಮಕರಣ ಮಾಡಿದ್ದಾರೆ. ಆದ್ಯಾ ಎಂಬುದು ಮಗುವಿನ ಹೆಸರು. ರಜನಿ ಟೈಟಲ್ ಕಾರ್ಡ್ ಓಪನ್ ಆಗುವ ರೀತಿಯಲ್ಲೇ ಮಗುವಿನ ಹೆಸರು ರಿವೀಲ್ ಆಗಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More