ಅಶ್ವಿನಿ ಪುನೀತ್-ಶೋಭಾ ಕರಂದ್ಲಾಜೆ ಭೇಟಿ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ಕುಮಾರ್ ಪ್ರಚಾರ ಮಾಡುತ್ತಿದಾರೆ. ಇತ್ತ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಸೆಲೆಬ್ರಿಟಿಗಳನ್ನು ರಾಜಕಾರಣಿಗಳು ಭೇಟಿ ಮಾಡುವುದು ಹೆಚ್ಚುತ್ತಿದೆ. ಕೆಲವೇ ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರ ಮನೆಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದ್ದರು. ಈ ಭೇಟಿಯ ಬಗ್ಗೆ ಶಿವರಾಜ್ಕುಮಾರ್ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಪರ ಚುನಾವಣಾ ಪ್ರಚಾರ ಮಾಡುವಾಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರೂ ಭೇಟಿ ಮಾಡುತ್ತಾರೆ. ಮಾಡಲಿ ಬಿಡಿ, ಅದರಲ್ಲಿ ತಪ್ಪೇನು ಇದೆ?’ ಎಂದು ಶಿವಣ್ಣ ಮರುಪ್ರಶ್ನೆ ಹಾಕಿದ್ದಾರೆ. ಇನ್ನು, ಶಿವರಾಜ್ಕುಮಾರ್ (Shivarajkumar) ಅವರ ಸಿನಿಮಾ, ಜಾಹೀರಾತು, ಬಿಲ್ಬೋರ್ಡ್ಗಳ ಪ್ರದರ್ಶನಕ್ಕೆ ನಿಷೇಧ ಹೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿತ್ತು. ಆ ಬಗ್ಗೆ ಉತ್ತರಿಸಿದ ಶಿವಣ್ಣ, ‘ನನ್ನ ತಾಯಾಣೆಗೂ ಗೊತ್ತಿಲ್ಲ. ಅದನ್ನು ನಮ್ಮ ಲೀಗಲ್ ಟೀಮ್ ನೋಡಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

