ಅಶ್ವಿನಿ ಪುನೀತ್​-ಶೋಭಾ ಕರಂದ್ಲಾಜೆ ಭೇಟಿ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

Updated on: Mar 24, 2024 | 5:57 PM

ಕಾಂಗ್ರೆಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್​ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್​ಕುಮಾರ್​ ಪ್ರಚಾರ ಮಾಡುತ್ತಿದಾರೆ. ಇತ್ತ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಸೆಲೆಬ್ರಿಟಿಗಳನ್ನು ರಾಜಕಾರಣಿಗಳು ಭೇಟಿ ಮಾಡುವುದು ಹೆಚ್ಚುತ್ತಿದೆ. ಕೆಲವೇ ದಿನಗಳ ಹಿಂದೆ ಅಶ್ವಿನಿ ಪುನೀತ್ ರಾಜ್​ಕುಮಾರ್​ (Ashwini Puneeth Rajkumar) ಅವರ ಮನೆಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದ್ದರು. ಈ ಭೇಟಿಯ ಬಗ್ಗೆ ಶಿವರಾಜ್​ಕುಮಾರ್​ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಪರ ಚುನಾವಣಾ ಪ್ರಚಾರ ಮಾಡುವಾಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಲ್ಲರೂ ಭೇಟಿ ಮಾಡುತ್ತಾರೆ. ಮಾಡಲಿ ಬಿಡಿ, ಅದರಲ್ಲಿ ತಪ್ಪೇನು ಇದೆ?’ ಎಂದು ಶಿವಣ್ಣ ಮರುಪ್ರಶ್ನೆ ಹಾಕಿದ್ದಾರೆ. ಇನ್ನು, ಶಿವರಾಜ್​ಕುಮಾರ್​ (Shivarajkumar) ಅವರ ಸಿನಿಮಾ, ಜಾಹೀರಾತು, ಬಿಲ್​ಬೋರ್ಡ್​ಗಳ ಪ್ರದರ್ಶನಕ್ಕೆ ನಿಷೇಧ ಹೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿತ್ತು. ಆ ಬಗ್ಗೆ ಉತ್ತರಿಸಿದ ಶಿವಣ್ಣ, ‘ನನ್ನ ತಾಯಾಣೆಗೂ ಗೊತ್ತಿಲ್ಲ. ಅದನ್ನು ನಮ್ಮ ಲೀಗಲ್​ ಟೀಮ್​ ನೋಡಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More